1. ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. [QBR2] ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ. [QBR]
2. ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ [QBR2] ನಿನ್ನ ಶತ್ರುಗಳು ಚದರಿಹೋಗಲಿ. [QBR] ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ [QBR2] ನಿನ್ನ ಶತ್ರುಗಳು ನಾಶವಾಗಲಿ. [QBR]
3. ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; [QBR2] ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ! [QBR]
4. ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. [QBR2] ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. [QBR] ಆತನ ಹೆಸರು ಯಾಹು. [QBR2] ಆತನ ಹೆಸರನ್ನು ಕೊಂಡಾಡಿರಿ! [QBR]
5. ದೇವರು ತನ್ನ ಪವಿತ್ರ ಆಲಯದಲ್ಲಿ, [QBR2] ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ. [QBR]
6. ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. [QBR2] ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. [QBR2] ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.
7. ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. [QBR2] ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು, [QBR]
8. ಭೂಮಿಯೇ ಕಂಪಿಸಿತು. [QBR2] ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು. [QBR]
9. ದೇವರೇ, ನೀನು ಮಳೆ ಸುರಿಸಿ, [QBR2] ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ. [QBR]
10. ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. [QBR2] ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ. [QBR]
11. ದೇವರು ಆಜ್ಞಾಪಿಸಲು ಅನೇಕರು [QBR2] ಈ ಸುವಾರ್ತೆಯನ್ನು ಸಾರಲು ಹೋದರು: [QBR]
12. “ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! [QBR2] ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು. [QBR]
13. ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. [QBR2] ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”
14. ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. [QBR2] ಅವರು ಸುರಿಯುತ್ತಿರುವ ಹಿಮದಂತಿದ್ದರು. [QBR]
15. ಬಾಷಾನ್ ಬೆಟ್ಟವು ಅನೇಕ ಶಿಖರಗಳುಳ್ಳ ಮಹಾಪರ್ವತ. [QBR]
16. ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? [QBR2] ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ [QBR2] ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ. [QBR]
17. ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. [QBR2] ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ. [QBR]
18. ಆತನು ಸೆರೆಯಾಳುಗಳನ್ನು ನಡೆಸಿಕೊಂಡು [QBR2] ಬೆಟ್ಟದ ಮೇಲೇರಿ ಹೋದನು; [QBR] ತನಗೆ ದ್ರೋಹಮಾಡಿದ ಜನರಿಂದ [QBR2] ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. [QBR] ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ. [QBR]
19. ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! [QBR2] ನಮ್ಮನ್ನು ರಕ್ಷಿಸುವವನು ಆತನೇ.
20. ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. [QBR2] ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು. [QBR]
21. ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ [QBR2] ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು. [QBR]
22. ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ [QBR2] ಪಶ್ಚಿಮ [*ಪಶ್ಚಿಮ ಅಕ್ಷರಶಃ, “ಸಮುದ್ರ.”] ದಿಕ್ಕಿನಿಂದಲೂ ಶತ್ರುವನ್ನು ಹಿಡಿದು ತರುವೆನು. [QBR]
23. ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. [QBR2] ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.”
24. ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. [QBR2] ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. [QBR]
25. ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ [QBR2] ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ. [QBR]
26. ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! [QBR2] ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ! [QBR]
27. ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; [QBR2] ಅದರ ನಂತರ ಯೆಹೂದನ ಮಹಾಕುಲವಿದೆ. [QBR2] ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ.
28. ದೇವರೆ, ನಿನ್ನ ಬಲವನ್ನು ನಮಗೆ ತೋರಿಸು! [QBR2] ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು. [QBR]
29. ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು [QBR2] ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು. [QBR]
30. ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. [QBR2] ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. [QBR] ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ [QBR2] ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು. [QBR]
31. ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. [QBR2] ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. [QBR]
32. ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ! [QBR2] ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ!
33. ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. [QBR2] ಆತನ ಗರ್ಜನೆಗೆ ಕಿವಿಗೊಡಿರಿ! [QBR]
34. ದೇವರ ಬಲವನ್ನು ಕೊಂಡಾಡಿರಿ. [QBR2] ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. [QBR2] ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ. [QBR]
35. ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. [QBR] ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. [QBR] ದೇವರಿಗೆ ಸ್ತೋತ್ರ! [PE]