ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. [QBR2] ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ. [QBR]
2. ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ [QBR2] ನಿನ್ನ ಶತ್ರುಗಳು ಚದರಿಹೋಗಲಿ. [QBR] ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ [QBR2] ನಿನ್ನ ಶತ್ರುಗಳು ನಾಶವಾಗಲಿ. [QBR]
3. ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; [QBR2] ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ! [QBR]
4. ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. [QBR2] ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. [QBR] ಆತನ ಹೆಸರು ಯಾಹು. [QBR2] ಆತನ ಹೆಸರನ್ನು ಕೊಂಡಾಡಿರಿ! [QBR]
5. ದೇವರು ತನ್ನ ಪವಿತ್ರ ಆಲಯದಲ್ಲಿ, [QBR2] ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ. [QBR]
6. ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. [QBR2] ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. [QBR2] ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.
7. ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. [QBR2] ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು, [QBR]
8. ಭೂಮಿಯೇ ಕಂಪಿಸಿತು. [QBR2] ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು. [QBR]
9. ದೇವರೇ, ನೀನು ಮಳೆ ಸುರಿಸಿ, [QBR2] ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ. [QBR]
10. ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. [QBR2] ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ. [QBR]
11. ದೇವರು ಆಜ್ಞಾಪಿಸಲು ಅನೇಕರು [QBR2] ಈ ಸುವಾರ್ತೆಯನ್ನು ಸಾರಲು ಹೋದರು: [QBR]
12. “ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! [QBR2] ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು. [QBR]
13. ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. [QBR2] ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”
14. ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. [QBR2] ಅವರು ಸುರಿಯುತ್ತಿರುವ ಹಿಮದಂತಿದ್ದರು. [QBR]
15. ಬಾಷಾನ್ ಬೆಟ್ಟವು ಅನೇಕ ಶಿಖರಗಳುಳ್ಳ ಮಹಾಪರ್ವತ. [QBR]
16. ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? [QBR2] ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ [QBR2] ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ. [QBR]
17. ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. [QBR2] ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ. [QBR]
18. ಆತನು ಸೆರೆಯಾಳುಗಳನ್ನು ನಡೆಸಿಕೊಂಡು [QBR2] ಬೆಟ್ಟದ ಮೇಲೇರಿ ಹೋದನು; [QBR] ತನಗೆ ದ್ರೋಹಮಾಡಿದ ಜನರಿಂದ [QBR2] ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. [QBR] ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ. [QBR]
19. ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! [QBR2] ನಮ್ಮನ್ನು ರಕ್ಷಿಸುವವನು ಆತನೇ.
20. ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. [QBR2] ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು. [QBR]
21. ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ [QBR2] ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು. [QBR]
22. ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ [QBR2] ಪಶ್ಚಿಮ [*ಪಶ್ಚಿಮ ಅಕ್ಷರಶಃ, “ಸಮುದ್ರ.”] ದಿಕ್ಕಿನಿಂದಲೂ ಶತ್ರುವನ್ನು ಹಿಡಿದು ತರುವೆನು. [QBR]
23. ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. [QBR2] ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.”
24. ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. [QBR2] ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. [QBR]
25. ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ [QBR2] ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ. [QBR]
26. ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! [QBR2] ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ! [QBR]
27. ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; [QBR2] ಅದರ ನಂತರ ಯೆಹೂದನ ಮಹಾಕುಲವಿದೆ. [QBR2] ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ.
28. ದೇವರೆ, ನಿನ್ನ ಬಲವನ್ನು ನಮಗೆ ತೋರಿಸು! [QBR2] ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು. [QBR]
29. ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು [QBR2] ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು. [QBR]
30. ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. [QBR2] ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. [QBR] ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ [QBR2] ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು. [QBR]
31. ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. [QBR2] ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. [QBR]
32. ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ! [QBR2] ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ!
33. ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. [QBR2] ಆತನ ಗರ್ಜನೆಗೆ ಕಿವಿಗೊಡಿರಿ! [QBR]
34. ದೇವರ ಬಲವನ್ನು ಕೊಂಡಾಡಿರಿ. [QBR2] ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. [QBR2] ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ. [QBR]
35. ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. [QBR] ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. [QBR] ದೇವರಿಗೆ ಸ್ತೋತ್ರ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 68 / 150
ಕೀರ್ತನೆಗಳು 68:85
1 ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ. 2 ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ. 3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ! 4 ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ! 5 ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ. 6 ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು. 7 ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು, 8 ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು. 9 ದೇವರೇ, ನೀನು ಮಳೆ ಸುರಿಸಿ, ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ. 10 ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ. 11 ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು: 12 “ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು. 13 ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.” 14 ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. ಅವರು ಸುರಿಯುತ್ತಿರುವ ಹಿಮದಂತಿದ್ದರು. 15 ಬಾಷಾನ್ ಬೆಟ್ಟವು ಅನೇಕ ಶಿಖರಗಳುಳ್ಳ ಮಹಾಪರ್ವತ. 16 ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ. 17 ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ. 18 ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ. 19 ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮನ್ನು ರಕ್ಷಿಸುವವನು ಆತನೇ. 20 ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು. 21 ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು. 22 ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ *ಪಶ್ಚಿಮ ಅಕ್ಷರಶಃ, “ಸಮುದ್ರ.” ದಿಕ್ಕಿನಿಂದಲೂ ಶತ್ರುವನ್ನು ಹಿಡಿದು ತರುವೆನು. 23 ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.” 24 ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. 25 ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ. 26 ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ! 27 ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; ಅದರ ನಂತರ ಯೆಹೂದನ ಮಹಾಕುಲವಿದೆ. ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ. 28 ದೇವರೆ, ನಿನ್ನ ಬಲವನ್ನು ನಮಗೆ ತೋರಿಸು! ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು. 29 ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು. 30 ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು. 31 ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. 32 ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ! ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ! 33 ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ! 34 ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ. 35 ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 68 / 150
Common Bible Languages
West Indian Languages
×

Alert

×

kannada Letters Keypad References