2. ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಕಳ್ಳುಸುಬಿನಲ್ಲಿ ಮುಳುಗಿ ಹೋಗುತ್ತಿದ್ದೇನೆ. ನಾನು ಆಳವಾದ ಮಡುವಿವೊಳಕ್ಕೆ ಬಂದಿದ್ದೇನೆ. ಅಲೆಗಳು ನನ್ನ ಸುತ್ತಲೂ ಬಡಿಯುತ್ತಿವೆ. ನಾನು ಮುಳುಗಿಹೋಗುತ್ತಿರುವೆ.
|
3. ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರು ನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.
|
4. ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹುಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.
|
6. ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.
|
13. ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ: ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.
|
14. ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.
|
15. ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.
|
16. ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.
|
19. ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ.
|
20. ನಾಚಿಕೆಯು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.
|
28. ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.
|
35. ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!
|