1. ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. [QBR2] ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು! [QBR]
2. ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; [QBR2] ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.
3. ನನ್ನ ದೇವರಾದ ಯೆಹೋವನೇ, ನಾನು ಯಾವುದೇ ಅಪರಾಧವನ್ನು ಮಾಡಿದ್ದರೆ, [QBR]
4. ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, [QBR2] ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ, [QBR]
5. ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, [QBR2] ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; [QBR2] ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.
6. ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! [QBR2] ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. [QBR2] ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು! [QBR]
7. ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ [QBR2] ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು. [QBR]
8. ಜನರಿಗೆ ನ್ಯಾಯತೀರಿಸು. [QBR2] ಯೆಹೋವನೇ, ನನಗೆ ನ್ಯಾಯತೀರಿಸು. [QBR2] ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು. [QBR]
9. ಕೆಟ್ಟವರನ್ನು ದಂಡಿಸು, [QBR2] ಒಳ್ಳೆಯವರಿಗೆ ಸಹಾಯಮಾಡು. [QBR] ದೇವರೇ ನೀನು ಒಳ್ಳೆಯವನು; [QBR2] ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.
10. ನನ್ನ ಗುರಾಣಿಯು ದೇವರೇ. [QBR2] ಆತನು ಯಥಾರ್ಥವಂತರನ್ನು ರಕ್ಷಿಸುವನು. [QBR]
11. ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. [QBR2] ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು. [QBR]
12. ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ. [QBR]
13. ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ. [*ಆತನು … ಸಿದ್ಧನಾಗಿದ್ದಾನೆ ಅಕ್ಷರಶಃ, “ಆತನು ಹಿಂತಿರುಗಿಕೊಳ್ಳುವುದಿಲ್ಲ. ಆತನು ತನ್ನ ಖಡ್ಗವನ್ನು ಹರಿತಗೊಳಿಸುವನು. ಆತನು ತನ್ನ ಬಿಲ್ಲನ್ನು ಹೂಡಿ ಗುರಿಯಿಟ್ಟಿದ್ದಾನೆ. ಆತನು ಮರಣಕರವಾದ ಆಯುಧವನ್ನು ಸಿದ್ಧಗೊಳಿಸಿದ್ದಾನೆ. ಆತನು ತನ್ನ ಅಗ್ನಿಬಾಣಗಳನ್ನು ಮಾಡಿದ್ದಾನೆ.”]
14. ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. [QBR2] ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು. [QBR]
15. ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; [QBR2] ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು. [QBR]
16. ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. [QBR2] ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. [QBR2] ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.
17. ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. [QBR2] ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು. [PE]