ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? [QBR2] ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ? [QBR]
2. ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. [QBR2] ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. [QBR] ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ. [QBR]
3. ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. [QBR2] ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
4. ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. [QBR2] ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು. [QBR]
5. ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ [QBR2] ಕಳೆ ಕೀಳುತ್ತಿರುವ ಜನರಂತಿದ್ದಾರೆ. [QBR]
6. ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ [QBR2] ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು. [QBR]
7. ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. [QBR2] ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ! [QBR]
8. ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ [QBR2] ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು. [QBR]
9. ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. [QBR2] ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. [QBR2] ಯಾರಿಗೂ ದಿಕ್ಕೇ ತೋಚುತ್ತಿಲ್ಲ. [QBR]
10. ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? [QBR2] ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ? [QBR]
11. ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? [QBR2] ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ! [QBR]
12. ದೇವರೇ, ಬಹುಕಾಲದಿಂದ ನೀನು ನಮ್ಮರಾಜ. [QBR2] ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ. [QBR]
13. ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. [QBR2] ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ. [QBR]
14. ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ. [QBR]
15. ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. [QBR2] ನದಿಗಳನ್ನು ಒಣಗಿಸುವಾತನೂ ನೀನೇ. [QBR]
16. ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. [QBR2] ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ. [QBR]
17. ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. [QBR2] ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ. [QBR]
18. ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. [QBR2] ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! [QBR2] ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ. [QBR]
19. ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. [QBR2] ನಿನ್ನ ಬಡಜನರನ್ನು ಮರೆತುಬಿಡಬೇಡ. [QBR]
20. ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. [QBR2] ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ. [QBR]
21. ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. [QBR2] ಅವರಿಗೆ ಕೇಡಾಗಲು ಬಿಡಬೇಡ. [QBR2] ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ. [QBR]
22. ದೇವರೇ, ಎದ್ದು ಹೋರಾಡು! [QBR2] ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ! [QBR]
23. ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. [QBR2] ಅವರು ನಿನಗೆ ಪದೇಪದೇ ಅವಮಾನಮಾಡಿದರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 74 / 150
ಕೀರ್ತನೆಗಳು 74:11
1 ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ? 2 ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ. 3 ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ. 4 ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು. 5 ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ. 6 ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು. 7 ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ! 8 ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು. 9 ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ. 10 ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ? 11 ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ! 12 ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ. 13 ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ. 14 ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ. 15 ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ. 16 ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ. 17 ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ. 18 ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ. 19 ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತುಬಿಡಬೇಡ. 20 ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ. 21 ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ. 22 ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ! 23 ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 74 / 150
Common Bible Languages
West Indian Languages
×

Alert

×

kannada Letters Keypad References