ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನಿನ್ನನ್ನು ಕೊಂಡಾಡುವೆವು! [QBR2] ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; [QBR2] ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
2. ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; [QBR2] ನಾನು ನೀತಿಯಿಂದಲೇ ತೀರ್ಪುಕೊಡುವೆ. [QBR]
3. ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ [QBR2] ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.
4. (4-5) “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! [QBR2] ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು.
5.
6. ಭೂಲೋಕದ ಯಾವ ಶಕ್ತಿಯೂ [QBR2] ಮನುಷ್ಯನನ್ನು ಉದ್ಧಾರ ಮಾಡಲಾರದು. [QBR]
7. ನ್ಯಾಯಾಧಿಪತಿಯು ದೇವರೇ. [QBR2] ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. [QBR2] ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. [QBR]
8. ಯೆಹೋವನ ಕೈಯಲ್ಲಿ ಪಾತ್ರೆಯಿದೆ. [QBR2] ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. [QBR] ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; [QBR2] ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! [QBR]
9. ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; [QBR2] ಇಸ್ರೇಲರ ದೇವರನ್ನು ಸಂಕೀರ್ತಿಸುವೆನು. [QBR]
10. ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು [QBR2] ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 75 / 150
1 ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. 2 ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.
3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ. 4 (4-5) “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು. 5 6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ.
ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 75 / 150
×

Alert

×

Kannada Letters Keypad References