ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! [QBR2] ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು. [QBR]
2. ಆತನ ಗುಡಾರವು ಸಾಲೇಮಿನಲ್ಲಿದೆ. [QBR2] ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ. [QBR]
3. ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ [QBR2] ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ.
4. ದೇವರೇ, ಶತ್ರುಗಳನ್ನು ಸೋಲಿಸಿ [QBR2] ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ. [QBR]
5. ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. [QBR2] ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. [QBR2] ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ. [QBR]
6. ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು [QBR2] ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. [QBR]
7. ದೇವರೇ, ನೀನು ಭಯಂಕರನೇ ಸರಿ! [QBR2] ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು? [QBR]
8. ಯೆಹೋವನು ಎದ್ದುನಿಂತು [QBR2] ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. [QBR]
9. ದೇವರು ಲೋಕದ ದೀನರನ್ನು ರಕ್ಷಿಸಿದನು. [QBR2] ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು. [QBR]
10. ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; [QBR2] ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.
11. ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, [QBR2] ನಿಮ್ಮ ಹರಕೆಗಳನ್ನು ಸಲ್ಲಿಸಿರಿ. [QBR] ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ. [QBR]
12. ಆತನು ಮಹಾನಾಯಕರುಗಳನ್ನು ಸೋಲಿಸುವನು. [QBR2] ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 76 / 150
ಕೀರ್ತನೆಗಳು 76:72
1 ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು. 2 ಆತನ ಗುಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ. 3 ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ. 4 ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ. 5 ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ. 6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. 7 ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು? 8 ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. 9 ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು. 10 ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು. 11 ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ. 12 ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 76 / 150
Common Bible Languages
West Indian Languages
×

Alert

×

kannada Letters Keypad References