2. ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.
|
6. ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.
|
7. ನಾನು ಆಶ್ಚರ್ಯದಿಂದ ಹೀಗಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?
|
10. ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “‘ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?’ ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ”
|
11. ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
|
17. ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.
|