1. ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; [QBR2] ನನ್ನ ನುಡಿಗಳನ್ನು ಲಾಲಿಸಿರಿ. [QBR]
2. ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; [QBR2] ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು. [QBR]
3. ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. [QBR2] ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು. [QBR]
4. ನಾವು ಅವುಗಳನ್ನು ಮರೆಯುವುದೇ ಇಲ್ಲ. [QBR2] ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. [QBR] ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ [QBR2] ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು. [QBR]
5. ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. [QBR2] ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. [QBR2] ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. [QBR2] ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು. [QBR]
6. ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. [QBR2] ಹೀಗೆ ಜನರು ಕೊನೆಯ ತಲೆಮಾರಿನವರೆಗೂ ಧರ್ಮಶಾಸ್ತ್ರವನ್ನು ತಿಳಿದಿರುವರು. [QBR]
7. ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. [QBR2] ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. [QBR2] ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು. [QBR]
8. ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, [QBR2] ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. [QBR] ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. [QBR2] ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.
9. ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. [QBR2] ಆದರೆ ಅವರು ಯುದ್ಧದಿಂದ ಓಡಿಹೋದರು. [QBR]
10. ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. [QBR2] ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ. [QBR]
11. ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ [QBR2] ಎಫ್ರಾಯಿಮಿನ ಜನರು ಮರೆತುಬಿಟ್ಟರು. [QBR]
12. ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ [QBR2] ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು. [QBR]
13. ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. [QBR2] ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು. [QBR]
14. ಹಗಲಿನಲ್ಲಿ ಮೋಡದಿಂದಲೂ [QBR2] ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು. [QBR]
15. ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ [QBR2] ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು. [QBR]
16. ಆತನು ಬಂಡೆಯಿಂದ ನೀರನ್ನು [QBR2] ನದಿಯಂತೆ ಬರಮಾಡಿದನು. [QBR]
17. ಆದರೂ ಅವರು ಅರಣ್ಯದಲ್ಲಿ [QBR2] ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು. [QBR]
18. ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು [QBR2] ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು. [QBR]
19. ಅವರು ಆತನಿಗೆ ವಿರೋಧವಾಗಿ ಮಾತಾಡಿ, [QBR2] “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ? [QBR]
20. ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! [QBR2] ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು. [QBR]
21. ಆ ಜನರು ಹೇಳಿದ್ದನ್ನು ಕೇಳಿ [QBR2] ಯೆಹೋವನು ಕೋಪಗೊಂಡನು. [QBR] ಆತನು ಯಾಕೋಬ್ಯರ ಮೇಲೆಯೂ [QBR2] ಇಸ್ರೇಲರ ಮೇಲೆಯೂ ಕೋಪಗೊಂಡನು. [QBR2]
22. ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. [QBR] ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ. [QBR]
23. ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, [QBR2] ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು. [QBR]
24. ಆಕಾಶದ ದ್ವಾರಗಳು ತೆರೆದು [QBR2] ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು. [QBR]
25. ಜನರು ದೇವದೂತರ ಆಹಾರವನ್ನು ತಿಂದರು. [QBR2] ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು. [QBR]
26. ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. [QBR2] ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು. [QBR]
27. ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ [QBR2] ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು. [QBR]
28. ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, [QBR2] ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು. [QBR]
29. ಅವರಿಗೆ ತಿನ್ನಲು ಹೇರಳವಾಗಿತ್ತು. [QBR2] ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು. [QBR]
30. ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. [QBR2] ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು. [QBR]
31. ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. [QBR2] ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು. [QBR]
32. ಆದರೂ ಅವರು ಪಾಪಮಾಡುತ್ತಾ ಬಂದರು. [QBR2] ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು. [QBR]
33. ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ [QBR2] ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು. [QBR]
34. ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, [QBR2] ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು. [QBR]
35. ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ [QBR2] ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು. [QBR]
36. ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು. [QBR]
37. ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. [QBR2] ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ. [QBR]
38. ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. [QBR2] ಆತನು ಅವರನ್ನು ನಾಶಮಾಡಲಿಲ್ಲ. [QBR] ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; [QBR2] ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು. [QBR]
39. ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. [QBR2] ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ. [QBR]
40. ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. [QBR2] ಆತನನ್ನು ಬಹಳವಾಗಿ ನೋಯಿಸಿದರು. [QBR]
41. ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. [QBR2] ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು. [QBR]
42. ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. [QBR2] ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು. [QBR]
43. ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ [QBR2] ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು. [QBR]
44. ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! [QBR2] ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ. [QBR]
45. ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; [QBR2] ಅವು ಈಜಿಪ್ಟಿನ ಜನರನ್ನು ಕಚ್ಚಿದವು. [QBR] ಆತನು ಕಪ್ಪೆಗಳನ್ನು ಕಳುಹಿಸಿದನು; [QBR2] ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು. [QBR]
46. ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ [QBR2] ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು. [QBR]
47. ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು; [QBR2] ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು. [QBR]
48. ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ [QBR2] ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು. [QBR]
49. ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. [QBR2] ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು. [QBR]
50. ಆತನು ತನ್ನ ಕೋಪವನ್ನು ತೋರಿಸಿದನು. [QBR2] ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. [QBR2] ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು. [QBR]
51. ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. [QBR2] ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು. [QBR]
52. ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. [QBR2] ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು. [QBR]
53. ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ [QBR2] ಸುರಕ್ಷಿತವಾಗಿ ಮುನ್ನಡೆಸಿದನು. [QBR] ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. [QBR2] ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು. [QBR]
54. ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ [QBR2] ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು. [QBR]
55. ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. [QBR2] ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; [QBR2] ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು. [QBR]
56. ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. [QBR2] ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. [QBR]
57. ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. [QBR2] ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು. [QBR]
58. ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. [QBR2] ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು. [QBR]
59. ದೇವರು ಇದನ್ನು ತಿಳಿದು ಬಹು ಕೋಪಗೊಂಡನು, [QBR2] ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು! [QBR]
60. ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. [QBR2] ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ. [QBR]
61. ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. [QBR2] ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು. [QBR]
62. ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. [QBR2] ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು. [QBR]
63. ಯುವಕರು ಬೆಂಕಿಯ ಪಾಲಾದರು. [QBR2] ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ. [QBR]
64. ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, [QBR2] ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ. [QBR]
65. ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ [QBR2] ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು. [QBR]
66. ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. [QBR2] ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು. [QBR]
67. ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. [QBR2] ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ. [QBR]
68. ಆತನು ಯೆಹೂದಕುಲವನ್ನೇ ಆರಿಸಿಕೊಂಡನು. [QBR2] ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು. [QBR]
69. ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ [QBR2] ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು. [QBR]
70. ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. [QBR2] ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು. [QBR]
71. ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ [QBR2] ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು. [QBR]
72. ದಾವೀದನು ಯಥಾರ್ಥಹೃದಯದಿಂದಲೂ [QBR2] ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು. [PE]