4. ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.
|
5. ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.
|
6. ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. ಹೀಗೆ ಜನರು ಕೊನೆಯ ತಲೆಮಾರಿನವರೆಗೊ ಧರ್ಮಶಾಸ್ತ್ರವನ್ನು ತಿಳಿದಿರುವರು.
|
7. ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.
|
8. ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.
|
13. ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.
|
20. ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.
|
26. ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.
|
30. ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು.
|
31. ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು.
|
35. ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.
|
38. ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.
|
39. ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನಾರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.
|
42. ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.
|
45. ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಆವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.
|
47. ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.
|
49. ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತನನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.
|
50. ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು.
|
51. ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.
|
53. ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು. ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು.
|
55. ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.
|
56. ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.
|
57. ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.
|
58. ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಅತನನ್ನು ರೇಗಿಸಿದರು.
|
60. ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.
|
65. ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.
|
66. ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು.
|
71. ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.
|