1. ರಚನೆಗಾರ : ಆಸಾಫ. ದೇವರೇ, ಅನ್ಯಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲೆ ಮಾಡಿದರು; ಜೆರುಸಲೇಮನ್ನು ನಾಶಮಾಡಿದರು.
|
2. ಅವರು ನಿನ್ನ ಸೇವಕರ ಸತ್ತದೇಹಗಳನ್ನು ಕ್ರೂರಪಕ್ಷಿಗಳಿಗೆ ಆಹಾರ ಮಾಡಿದರು. ಅವರು ನಿನ್ನ ಭಕ್ತರ ದೇಹಗಳನ್ನು ಕ್ರೂರ ಪ್ರಾಣಿಗಳಿಗೆ ಹಾಕಿದರು.
|
4. ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿಮಾಡಿದರು.
|
6. ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.
|
8. ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!
|
9. ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.
|
10. ಅನ್ಯಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.
|
12. ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.
|
13. ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.
|