1. ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.
|
2. ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
|
4. ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವನು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
|
5. ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
|
6. ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
|