ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. [QBR2] ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.
2. ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; [QBR2] ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
3. ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ [QBR2] ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. [QBR]
4. ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? [QBR2] ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? [QBR] ಮನುಷ್ಯರು ಎಷ್ಟರವರು? [QBR2] ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
5. ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. [QBR2] ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. [QBR2] ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. [QBR]
6. ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. [QBR2] ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. [QBR]
7. ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು. [QBR]
8. ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ [QBR2] ದೊರೆತನ ಮಾಡುವರು. [QBR]
9. ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
ಕೀರ್ತನೆಗಳು 8:76
1 ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು. 2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ. 3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. 4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು? 5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. 6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. 7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು. 8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು. 9 ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
Common Bible Languages
West Indian Languages
×

Alert

×

kannada Letters Keypad References