1. ರಚನೆಗಾರ : ಆಸಾಫ. ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
|
2. ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು.
|
4. ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?
|
5. ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.
|
8. ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.
|
9. “ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
|
11. ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು.
|
12. ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.
|
13. ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.
|
16. ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.
|