1. ಇಸ್ರೇಲನ್ನು ಕಾಯುವ ಕುರುಬನೇ, [QBR2] ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, [QBR] ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, [QBR2] ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ. [QBR]
2. ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. [QBR2] ಬಂದು ನಮ್ಮನ್ನು ರಕ್ಷಿಸು. [QBR]
3. ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. [QBR2] ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು! [QBR]
4. ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? [QBR2] ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ? [QBR]
5. ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. [QBR2] ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ. [QBR]
6. ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. [QBR2] ಶತ್ರುಗಳು ನಮ್ಮನ್ನು ನೋಡಿ ನಗುವರು. [QBR]
7. ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. [QBR2] ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
8. ಹಿಂದಿನ ಕಾಲದಲ್ಲಿ ನೀನು ನಮ್ಮನ್ನು [QBR2] ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. [QBR] ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. [QBR2] ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ. [QBR]
9. “ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. [QBR2] ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. [QBR2] ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. [QBR]
10. ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. [QBR2] ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು. [QBR2]
11. ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. [QBR2] ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು. [QBR]
12. ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? [QBR2] ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು. [QBR]
13. ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. [QBR2] ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ. [QBR]
14. ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. [QBR2] ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು. [QBR]
15. ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. [QBR2] ನೀನು ಬೆಳೆಸಿದ ಎಳೆ ಸಸಿಯನ್ನು [*ಎಳೆ ಸಸಿ ಅಕ್ಷರಶಃ, “ಮಗನು.”] ನೋಡು. [QBR]
16. ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. [QBR2] ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.
17. ನೀನು ಆರಿಸಿಕೊಂಡಿರುವಾತನ [†ಆರಿಸಿಕೊಂಡಿರುವಾತನ ಅಕ್ಷರಶಃ, “ನಿನ್ನ ಬಲಗಡೆಯಲ್ಲಿ ನಿಂತಿರುವವನ.”] ಕಡೆಗೆ ಕೈಚಾಚಿ ಸಹಾಯ ಮಾಡು. [QBR2] ನೀನು ಬೆಳೆಸಿದ ಜನರ [‡ಜನರ ಅಕ್ಷರಶಃ, “ನರಪುತ್ರ.”] ಕಡೆಗೆ ಕೈಚಾಚು. [QBR]
18. ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ. [QBR2] ನಮ್ಮನ್ನು ಬದುಕಿಸು. [QBR2] ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು. [QBR]
19. ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, [QBR2] ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು. [PE]