5. ಆತನು ಯೋಸೇಫನನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು. ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!
|
6. ಆತನು ಇಂತೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
|
7. ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
|
10. ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.
|
16. ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.
|