3. ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
|
4. ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ “ಇಸ್ರೇಲ್” ಎಂಬ ಹೆಸರೇ ಅಳಿದು ಹೋಗುವುದು.”
|
11. ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚೆಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
|
16. ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
|
18. ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.
|