1. ದೇವರೇ, ಸುಮ್ಮನಿರಬೇಡ! [QBR2] ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. [QBR2] ದೇವರೇ, ದಯವಿಟ್ಟು ಮಾತನಾಡು. [QBR]
2. ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. [QBR2] ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ. [QBR]
3. ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. [QBR2] ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ. [QBR]
4. ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. [QBR2] ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.” [QBR]
5. ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ [QBR2] ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ. [QBR]
6. (6-7) ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, [QBR2] ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, [QBR2] ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. [QBR2] ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ. [QBR]
7.
8. ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು [QBR2] ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.
9. ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ [QBR2] ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು. [QBR]
10. ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. [QBR2] ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು. [QBR]
11. ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. [QBR] ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. [QBR2] ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. [QBR]
12. ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು. [QBR]
13. ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. [QBR2] ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು. [QBR]
14. ಕಾಡನ್ನು ನಾಶಮಾಡುವ ಬೆಂಕಿಯಂತೆಯೂ [QBR2] ಬೆಟ್ಟಗಳನ್ನು ಸುಟ್ಟುಹಾಕುವ ಅಗ್ನಿಜ್ವಾಲೆಯಂತೆಯೂ ಅವರನ್ನು ನಾಶಮಾಡು. [QBR]
15. ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. [QBR2] ಸುಂಟರ ಗಾಳಿಯಂತೆ ಅವರನ್ನು ನಡುಗಿಸು. [QBR]
16. ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; [QBR2] ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು. [QBR]
17. ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. [QBR2] ಅವರು ಅವಮಾನಗೊಂಡು ನಾಶವಾಗಲಿ. [QBR]
18. ಆಗ ಅವರು ನೀನೊಬ್ಬನೇ ದೇವರೆಂದೂ [QBR2] ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. [QBR] ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ [QBR2] ದೇವರೆಂದು ಅವರು ಅರಿತುಕೊಳ್ಳುವರು. [PE]