2. ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.
|
3. ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡುಕಟ್ಟಿಕೊಂಡು ಮರಿಮಾಡುತ್ತವೆ.
|
6. ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ಕೊಳ್ಳಗಳಿಂದ ಸಮೃದ್ಧಿಗೊಳಿಸುವುದು.
|
10. ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನಾಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.
|
11. ಯೆಹೋವದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.
|