1. ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ. [QBR2] ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು. [QBR]
2. ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! [QBR2] ನಾನು ನಿನ್ನ ಸೇವಕನು, ನೀನು ನನ್ನ ದೇವರು. [QBR2] ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು. [QBR]
3. ನನ್ನ ಯೆಹೋವನೇ, ನನಗೆ ಕರುಣೆತೋರು. [QBR2] ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ. [QBR]
4. ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. [QBR2] ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು. [QBR]
5. ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. [QBR2] ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. [QBR2] ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ. [QBR]
6. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. [QBR2] ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು. [QBR]
7. ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. [QBR2] ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ. [QBR]
8. ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. [QBR2] ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು. [QBR]
9. ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. [QBR2] ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. [QBR2] ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ. [QBR]
10. ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! [QBR2] ನೀನೇ, ಹೌದು, ನೀನೊಬ್ಬನೇ ದೇವರು! [QBR]
11. ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. [QBR2] ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. [QBR] ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. [QBR2] ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು. [QBR]
12. ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; [QBR2] ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು! [QBR]
13. ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. [QBR2] ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ. [QBR]
14. ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. [QBR2] ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. [QBR2] ಅವರು ನನ್ನನ್ನು ಗೌರವಿಸುವುದಿಲ್ಲ. [QBR]
15. ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. [QBR2] ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ. [QBR]
16. ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. [QBR2] ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. [QBR2] ನಿನ್ನ ಸೇವಕನ ಮಗನನ್ನು ರಕ್ಷಿಸು. [QBR]
17. ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. [QBR2] ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. [QBR2] ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ. [PE]