1. ರಚನೆಗಾರರು : ಕೋರಹೀಯರಿಗೆ ಸೇರಿದ ಚೇರಹ ಕುಟುಂಬದ ಹೇಮಾನ. ಯೆಹೋವದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.
|
5. ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ.
|
8. ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಾಲಾರೆನು.
|
9. ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!
|
10. ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವಿಯಾ? ಇಲ್ಲ! ದೆವ್ವಗಳು ಎದ್ದು ನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!
|
11. ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.
|
12. ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.
|
15. ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.
|
18. ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.
|