2. ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!
|
5. ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.
|
10. ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿಹೋಗುತ್ತೇವೆ.
|
11. ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.
|
17. ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.
|