2. ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ, ನನ್ನ ಕೋಟೆಯೂ, ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.
|
4. ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.
|
7. ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.
|
14. ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
|
15. ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನ ಪಡಿಸುವೆನು.
|
16. ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”
|