1. ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
|
4. ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
|
6. ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
|
7. ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
|
8. ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
|