1. {ರಕ್ಷಣೆ ಹೊಂದಿದವರ ಉತ್ಸವ ಗೀತೆ} PS ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು. PEPS
|
2. ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.
|
3. ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ. PEPS
|
4. ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.
|
6. {ಮೂರು ಮಂದಿ ದೇವದೂತರು} PS ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.
|
7. ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು. PEPS
|
8. ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು. PEPS
|
9. ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.
|
10. ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.
|
11. ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”
|
12. ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು. PEPS
|
13. ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” PEPS “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ. PS
|
14. {ಭೂಲೋಕದ ಸುಗ್ಗೀಕಾಲ} PS ನಾನು ನೋಡಿದಾಗ ನನ್ನ ಎದುರಿನಲ್ಲಿ ಮನುಷ್ಯಕುಮಾರನಂತೆ *ಮನುಷ್ಯಕುಮಾರ ಇದು ಯೇಸುಕ್ರಿಸ್ತನಿಗೆ ಕೊಡಲ್ಪಟ್ಟಿರುವ ಹೆಸರು. ಸಾಮಾನ್ಯವಾಗಿ ಯೇಸುಕ್ರಿಸ್ತನು ಸ್ವತಃ ತನ್ನನ್ನೇ ಕುರಿತು ಈ ಪದವನ್ನು ಉಪಯೋಗಿಸುತ್ತಾನೆ. ನೋಡಿರಿ: ದಾನಿಯೇಲನು 7:13-14. ಕಾಣುತ್ತಿದ್ದವನು ಆ ಬಿಳಿಯ ಮೋಡದ ಮೇಲೆ ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು ಮತ್ತು ಆತನ ಕೈಯಲ್ಲಿ ಹರಿತವಾದ ಕುಡುಗೋಲಿತ್ತು.
|
15. ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.
|
16. ಆದ್ದರಿಂದ ಮೋಡದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. PEPS
|
18. ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.
|
19. ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ, ದ್ರಾಕ್ಷಿಯನ್ನೆಲ್ಲಾ ಒಟ್ಟುಗೂಡಿಸಿ, ದೇವರ ಕೋಪವೆಂಬ ದ್ರಾಕ್ಷಿಯ ಆಲೆಗೆ ಎಸೆದನು.
|
20. ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು. PE
|