ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ರೋಮಾಪುರದವರಿಗೆ
1. {ಪವಿತ್ರಾತ್ಮನಿಗೆ ಅಧೀನವಾದ ಜೀವಿತ} [PS] ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.
2. ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.
3. ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
4. ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು. [PE][PS]
5. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.
6. ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.
7. ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.
8. ತಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಪಟ್ಟಿರುವ ಆ ಜನರು ದೇವರನ್ನು ಮೆಚ್ಚಿಸಲು ಸಾಧ್ಯವಿಲ್ಲ. [PE][PS]
9. ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.
10. ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ.
11. ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ. [PE][PS]
12. ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು.
13. ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ. [PE][PS]
14. ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.
15. ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.
16. ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.
17. ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. [PS]
18. {ಭವಿಷ್ಯತ್ತಿನಲ್ಲಿ ನಮಗೆ ಮಹಿಮೆ ದೊರೆಯುವುದು} [PS] ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.
19. ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.
20. ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:
21. ಸರ್ವಸೃಷ್ಟಿಯು ನಾಶನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಸ್ವಾತಂತ್ರವನ್ನೂ ಮಹಿಮೆಯನ್ನೂ ಹೊಂದಿಕೊಳ್ಳುತ್ತದೆ ಎಂಬುದೇ. [PE][PS]
22. ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.
23. ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.
24. ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.
25. ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ. [PE][PS]
26. ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.
27. ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ. [PE][PS]
28. ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.
29. ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.
30. ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು. [PS]
31. {ಕ್ರಿಸ್ತ ಯೇಸುವಿನಲ್ಲಿ ದೇವರ ಪ್ರೀತಿ} [PS] ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.
32. ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.
33. ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.
34. ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.
35. ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!
36. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. [QBR2] ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.” ಕೀರ್ತನೆ. 44:22 [PS]
37. ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.
38. (38-39) ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. [PE]
39.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 16
1 2 3 4 5 6 7 8 9 10 11 12 13 14 15 16
ಪವಿತ್ರಾತ್ಮನಿಗೆ ಅಧೀನವಾದ ಜೀವಿತ 1 ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ. 2 ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು. 3 ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು. 4 ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು. 5 ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ. 6 ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ. 7 ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ. 8 ತಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಪಟ್ಟಿರುವ ಆ ಜನರು ದೇವರನ್ನು ಮೆಚ್ಚಿಸಲು ಸಾಧ್ಯವಿಲ್ಲ. 9 ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ. 10 ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ. 11 ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ. 12 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು. 13 ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ. 14 ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ. 15 ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ. 16 ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ. 17 ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. ಭವಿಷ್ಯತ್ತಿನಲ್ಲಿ ನಮಗೆ ಮಹಿಮೆ ದೊರೆಯುವುದು 18 ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ. 19 ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ. 20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ: 21 ಸರ್ವಸೃಷ್ಟಿಯು ನಾಶನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಸ್ವಾತಂತ್ರವನ್ನೂ ಮಹಿಮೆಯನ್ನೂ ಹೊಂದಿಕೊಳ್ಳುತ್ತದೆ ಎಂಬುದೇ. 22 ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ. 23 ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ. 24 ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ. 25 ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ. 26 ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ. 27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ. 28 ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು. 29 ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ. 30 ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು. ಕ್ರಿಸ್ತ ಯೇಸುವಿನಲ್ಲಿ ದೇವರ ಪ್ರೀತಿ 31 ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು. 32 ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ. 33 ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ. 34 ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ. 35 ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ! 36 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.” ಕೀರ್ತನೆ. 44:22 37 ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ. 38 (38-39) ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. 39
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 16
1 2 3 4 5 6 7 8 9 10 11 12 13 14 15 16
×

Alert

×

Kannada Letters Keypad References