ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಪರಮ ಗೀತ
1. ನಾನು ಶಾರೋನಿನಲ್ಲಿರುವ ಗುಲಾಬಿ; [QBR2] ತಗ್ಗುಗಳಲ್ಲಿರುವ ತಾವರೆ.
2. {ಪ್ರಿಯಕರ} [PS] ನನ್ನ ಪ್ರಿಯೆ, ಮುಳ್ಳುಗಳ ನಡುವೆ ಇರುವ ತಾವರೆ ಹೂವಿನಂತೆ [QBR2] ನೀನು ಯುವತಿಯರಲ್ಲೆಲ್ಲಾ ಶ್ರೇಷ್ಠಳು.
3. {ಪ್ರಿಯತಮೆ} [PS] ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ [QBR2] ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; [QBR2] ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು. [QBR]
4. {ಪ್ರಿಯತಮೆ ಸ್ತ್ರೀಯರಿಗೆ} [PS] ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; [QBR2] ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ. [QBR]
5. ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; [QBR2] ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ವಸ್ಥಳಾಗಿರುವೆ. [QBR]
6. ನನ್ನ ಪ್ರಿಯನ ಎಡಗೈ ತಲೆದಿಂಬಾಗಿ [QBR2] ಅವನ ಬಲಗೈ ನನ್ನನ್ನು ತಬ್ಬಿಕೊಳ್ಳುವುದು!
7. ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, [QBR2] ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ [QBR2] ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣ ಮಾಡಿರಿ.
8. {ಪ್ರಿಯತಮೆ} [PS] ಅಗೋ, ನನ್ನ ಪ್ರಿಯನ ಸ್ವರ! [QBR2] ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ [QBR2] ಗುಡ್ಡಗಳ ಮೇಲೆ ಕುಪ್ಪಳಿಸುತ್ತಾ ಬರುತ್ತಿದ್ದಾನೆ. [QBR]
9. ನನ್ನ ಪ್ರಿಯನು ಸಾರಂಗದಂತೆಯೂ [QBR2] ಪ್ರಾಯದ ಜಿಂಕೆಯಂತೆಯೂ ಇದ್ದಾನೆ. [QBR] ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; [QBR2] ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; [QBR2] ಕಿಟಕಿಗಳಿಂದ ನೋಡುತ್ತಿದ್ದಾನೆ. [QBR]
10. ನನ್ನ ಪ್ರಿಯನು ನನಗೆ ಹೀಗೆಂದನು: [QBR] “ನನ್ನ ಪ್ರಿಯಳೇ, ನನ್ನ ಸುಂದರಿಯೇ, [QBR2] ಎದ್ದೇಳು, ನಾವು ದೂರ ಹೋಗೋಣ! [QBR]
11. ಇಗೋ, ಚಳಿಗಾಲ ಕಳೆಯಿತು; [QBR2] ಮಳೆಗಾಲ ಮುಗಿದುಹೋಯಿತು. [QBR]
12. ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; [QBR2] ಪಕ್ಷಿಗಳು ಹಾಡುವ ಸಮಯವು ಬಂದಿದೆ. [QBR2] ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ. [QBR]
13. ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; [QBR2] ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. [QBR] ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, [QBR2] ನಾವು ದೂರ ಹೋಗೋಣ!”
14. {ಪ್ರಿಯಕರ} [PS] ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ [QBR2] ನನ್ನ ಪಾರಿವಾಳವೇ, [QBR] ನಿನ್ನ ರೂಪವನ್ನು ತೋರಿಸು; [QBR2] ನಿನ್ನ ಸ್ವರವನ್ನು ಕೇಳಿಸು. [QBR] ನಿನ್ನ ಸ್ವರ ಎಷ್ಟೋ ಮಧುರ! [QBR2] ನಿನ್ನ ರೂಪ ಎಷ್ಟೋ ಅಂದ!
15. {ಪ್ರಿಯತಮೆ ಸ್ತ್ರೀಯರಿಗೆ} [PS] ದ್ರಾಕ್ಷಿತೋಟಗಳನ್ನು ಹಾಳುಮಾಡುವ [QBR2] ನರಿಗಳನ್ನೂ [QBR] ನರಿಮರಿಗಳನ್ನೂ ಹಿಡಿಯಿರಿ! [QBR2] ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.
16. ನನ್ನ ಪ್ರಿಯನು ನನ್ನವನೇ! [QBR2] ನಾನು ಅವನವಳೇ! [QBR] ಹಗಲು ತನ್ನ ಕೊನೆ ಉಸಿರೆಳೆಯುವತನಕ, ನೆರಳು ಓಡಿಹೋಗುವ ತನಕ [QBR2]
17. ನನ್ನ ಪ್ರಿಯನು ನೆಲದಾವರೆಗಳ ಮಧ್ಯದಲ್ಲಿ ಮೇಯಿಸುವನು. [QBR] ನನ್ನ ಪ್ರಿಯನೇ, ಹೊರಡು, [QBR2] ಬೆತೇರ್ ಬೆಟ್ಟಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು! [PE]
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 8
1 2 3 4 5 6 7 8
1 ನಾನು ಶಾರೋನಿನಲ್ಲಿರುವ ಗುಲಾಬಿ; ತಗ್ಗುಗಳಲ್ಲಿರುವ ತಾವರೆ. ಪ್ರಿಯಕರ 2 ನನ್ನ ಪ್ರಿಯೆ, ಮುಳ್ಳುಗಳ ನಡುವೆ ಇರುವ ತಾವರೆ ಹೂವಿನಂತೆ ನೀನು ಯುವತಿಯರಲ್ಲೆಲ್ಲಾ ಶ್ರೇಷ್ಠಳು. ಪ್ರಿಯತಮೆ 3 ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.
ಪ್ರಿಯತಮೆ ಸ್ತ್ರೀಯರಿಗೆ 4 ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ.
5 ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ವಸ್ಥಳಾಗಿರುವೆ.
6 ನನ್ನ ಪ್ರಿಯನ ಎಡಗೈ ತಲೆದಿಂಬಾಗಿ ಅವನ ಬಲಗೈ ನನ್ನನ್ನು ತಬ್ಬಿಕೊಳ್ಳುವುದು! 7 ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣ ಮಾಡಿರಿ. ಪ್ರಿಯತಮೆ 8 ಅಗೋ, ನನ್ನ ಪ್ರಿಯನ ಸ್ವರ! ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ ಗುಡ್ಡಗಳ ಮೇಲೆ ಕುಪ್ಪಳಿಸುತ್ತಾ ಬರುತ್ತಿದ್ದಾನೆ.
9 ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ.
ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.
10 ನನ್ನ ಪ್ರಿಯನು ನನಗೆ ಹೀಗೆಂದನು:
“ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!
11 ಇಗೋ, ಚಳಿಗಾಲ ಕಳೆಯಿತು; ಮಳೆಗಾಲ ಮುಗಿದುಹೋಯಿತು.
12 ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.
13 ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ.
ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”
ಪ್ರಿಯಕರ 14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ,
ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು.
ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!
ಪ್ರಿಯತಮೆ ಸ್ತ್ರೀಯರಿಗೆ 15 ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ
ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.
16 ನನ್ನ ಪ್ರಿಯನು ನನ್ನವನೇ! ನಾನು ಅವನವಳೇ!
ಹಗಲು ತನ್ನ ಕೊನೆ ಉಸಿರೆಳೆಯುವತನಕ, ನೆರಳು ಓಡಿಹೋಗುವ ತನಕ
17 ನನ್ನ ಪ್ರಿಯನು ನೆಲದಾವರೆಗಳ ಮಧ್ಯದಲ್ಲಿ ಮೇಯಿಸುವನು.
ನನ್ನ ಪ್ರಿಯನೇ, ಹೊರಡು, ಬೆತೇರ್ ಬೆಟ್ಟಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು!
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 8
1 2 3 4 5 6 7 8
×

Alert

×

Kannada Letters Keypad References