ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪರಮ ಗೀತ
1. ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.
2. ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.
3. ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.
4. ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.
5. ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.
6. ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
7. ನನ್ನ ಪ್ರಿಯೆ, ನೀನು ಸರ್ವಾಂಗ ಸುಂದರಿ. ನಿನಗೆ ಎಲ್ಲಿಯೂ ಕಲೆಗಳಿಲ್ಲ!
8. ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!
9. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದೀ.
10. ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!
11. ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳ ದ್ರವ್ಯದಂತೆ ಸುವಾಸನೆಭರಿತವಾಗಿವೆ.
12. ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದ ಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.
13. [This verse may not be a part of this translation]
14. [This verse may not be a part of this translation]
15. ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.
16. ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.

Notes

No Verse Added

Total 8 Chapters, Current Chapter 4 of Total Chapters 8
1 2 3 4 5 6 7 8
ಪರಮ ಗೀತ 4:1
1. ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.
2. ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.
3. ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.
4. ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.
5. ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.
6. ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
7. ನನ್ನ ಪ್ರಿಯೆ, ನೀನು ಸರ್ವಾಂಗ ಸುಂದರಿ. ನಿನಗೆ ಎಲ್ಲಿಯೂ ಕಲೆಗಳಿಲ್ಲ!
8. ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!
9. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದೀ.
10. ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!
11. ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳ ದ್ರವ್ಯದಂತೆ ಸುವಾಸನೆಭರಿತವಾಗಿವೆ.
12. ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದ ಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.
13. This verse may not be a part of this translation
14. This verse may not be a part of this translation
15. ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.
16. ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.
Total 8 Chapters, Current Chapter 4 of Total Chapters 8
1 2 3 4 5 6 7 8
×

Alert

×

kannada Letters Keypad References