ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಪರಮ ಗೀತ
1. ಸೊಲೊಮೋನನ ಮನೋಹರವಾದ ಗೀತೆ
2. {ಪ್ರಿಯತಮೆ ಪ್ರಿಯಕರನಿಗೆ} [PS] ನಿನ್ನ ಬಾಯಿಂದ ನನ್ನನ್ನು ಮುದ್ದಾಡು, [QBR2] ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ. [QBR]
3. ನಿನ್ನ ತೈಲವು ಪರಿಮಳಭರಿತವಾಗಿದೆ; [QBR2] ನಿನ್ನ ಹೆಸರು ಸುಗಂಧದ್ರವ್ಯದಂತಿದೆ. [QBR2] ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು. [QBR]
4. ನನ್ನನ್ನು ಕರೆದುಕೊಂಡು ಹೋಗು! [QBR2] ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. [QBR2] ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. [QBR2] ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು. {ಪ್ರಿಯತಮೆ ಜೆರುಸಲೇಮಿನ ಸ್ತ್ರೀಯರಿಗೆ}
5. {ಜೆರುಸಲೇಮಿನ ಸ್ತ್ರೀಯರು} [PS] ಜೆರುಸಲೇಮಿನ ಸ್ತ್ರೀಯರೇ, [QBR2] ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ [QBR2] ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.
6. ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. [QBR2] ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು [QBR] ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. [QBR2] ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.
7. {ಪ್ರಿಯತಮೆ ಪ್ರಿಯಕರನಿಗೆ} [PS] ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? [QBR2] ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? [QBR] ಮುಸುಕುಹಾಕಿಕೊಂಡು [QBR2] ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?
8. {ಪ್ರಿಯಕರನು ಪ್ರಿಯತಮೆಗೆ} [PS] ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, [QBR2] ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, [QBR] ಹೋಗು, ಕುರಿಗಳನ್ನು ಹಿಂಬಾಲಿಸು. [QBR2] ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
9. ನನ್ನ ಪ್ರಿಯೆ, ಫರೋಹನ ರಥಗಳ ಮಧ್ಯದಲ್ಲಿರುವ [QBR2] ಹೆಣ್ಣು ಕುದುರೆಗಿಂತಲೂ ನೀನು ಸುಂದರಳಾಗಿರುವೆ. [QBR]
10. ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. [QBR2] ನಿನ್ನ ಕಂಠವು ಹಾರಗಳಿಂದ ಅಂದವಾಗಿವೆ. [QBR]
11. ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು [QBR2] ನಾವು ನಿನಗೋಸ್ಕರ ಮಾಡಿಸುವೆವು.
12. {ಪ್ರಿಯತಮೆ} [PS] ಓಲಗದ ಮೇಲೆ ಮಲಗಿರುವ ರಾಜನಿಗೆ [QBR2] ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು. [QBR]
13. ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ [QBR2] ಗೋಲರಸದ ಚೀಲದಂತಿದ್ದಾನೆ. [QBR]
14. ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ [QBR2] ಗೋರಂಟೆಯ ಹೂಗೊಂಚಲು.
15. {ಪ್ರಿಯಕರ} [PS] ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! [QBR2] ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.
16. {ಪ್ರಿಯತಮೆ} [PS] ನನ್ನ ಪ್ರಿಯನೇ, ನೀನು ಬಹು ಸುಂದರ! [QBR2] ಹೌದು, ನೀನು ಎಷ್ಟೋ ಮನೋಹರ! [QBR] ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ! [QBR2]
17. ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲೆಗಳು. [QBR2] ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು. [PE]
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 8
1 2 3 4 5 6 7 8
1 ಸೊಲೊಮೋನನ ಮನೋಹರವಾದ ಗೀತೆ ಪ್ರಿಯತಮೆ ಪ್ರಿಯಕರನಿಗೆ 2 ನಿನ್ನ ಬಾಯಿಂದ ನನ್ನನ್ನು ಮುದ್ದಾಡು, ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ.
3 ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.
4 ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು. ಪ್ರಿಯತಮೆ ಜೆರುಸಲೇಮಿನ ಸ್ತ್ರೀಯರಿಗೆ ಜೆರುಸಲೇಮಿನ ಸ್ತ್ರೀಯರು 5 ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ. 6 ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು
ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.
ಪ್ರಿಯತಮೆ ಪ್ರಿಯಕರನಿಗೆ 7 ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ?
ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?
ಪ್ರಿಯಕರನು ಪ್ರಿಯತಮೆಗೆ 8 ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ,
ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
9 ನನ್ನ ಪ್ರಿಯೆ, ಫರೋಹನ ರಥಗಳ ಮಧ್ಯದಲ್ಲಿರುವ ಹೆಣ್ಣು ಕುದುರೆಗಿಂತಲೂ ನೀನು ಸುಂದರಳಾಗಿರುವೆ.
10 ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿವೆ.
11 ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು. ಪ್ರಿಯತಮೆ 12 ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.
13 ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.
14 ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ ಗೋರಂಟೆಯ ಹೂಗೊಂಚಲು. ಪ್ರಿಯಕರ 15 ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ. ಪ್ರಿಯತಮೆ 16 ನನ್ನ ಪ್ರಿಯನೇ, ನೀನು ಬಹು ಸುಂದರ! ಹೌದು, ನೀನು ಎಷ್ಟೋ ಮನೋಹರ!
ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ!
17 ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲೆಗಳು. ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು.
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 8
1 2 3 4 5 6 7 8
×

Alert

×

Kannada Letters Keypad References