ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಪರಮ ಗೀತ
1. {ಪ್ರಿಯತಮೆ} [PS] ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ [QBR2] ಹಾಸಿಗೆಯ ಮೇಲೆ ಹುಡುಕಿದೆನು. [QBR] ಎಷ್ಟು ಹುಡುಕಿದರೂ [QBR2] ಅವನು ಸಿಕ್ಕಲಿಲ್ಲ. [QBR]
2. ಈಗ ನಾನು ಎದ್ದು [QBR2] ನಗರದಲ್ಲೆಲ್ಲಾ ಸುತ್ತಾಡುವೆನು. [QBR] ನನ್ನ ಪ್ರಿಯನಿಗಾಗಿ [QBR2] ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, [QBR2] ಆದರೆ ಅವನು ಸಿಕ್ಕಲಿಲ್ಲ. [QBR]
3. ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, [QBR2] “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.
4. ಅಲ್ಲಿಂದ ಸ್ವಲ್ಪದೂರ ಹೋದಾಗ, [QBR2] ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. [QBR] ನನ್ನ ತಾಯಿಯ ಮನೆಗೆ, [QBR2] ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ [QBR2] ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.
5. {ಪ್ರಿಯತಮೆ ಸ್ತ್ರೀಯರಿಗೆ} [PS] ಜೆರುಸಲೇಮಿನ ಸ್ತ್ರೀಯರೇ, [QBR2] ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು [QBR] ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ [QBR2] ನನಗೆ ಪ್ರಮಾಣಮಾಡಿರಿ.
6. {ಜೆರುಸಲೇಮಿನ ಸ್ತ್ರೀಯರ ಮಾತುಗಳು} [PS] ಮಹಾ ಜನಸಮೂಹದೊಡನೆ [QBR2] ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? [QBR] ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ [QBR2] ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.
7. ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. [QBR2] ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. [QBR2] ಅವರು ಇಸ್ರೇಲಿನ ಸೈನಿಕರು! [QBR]
8. ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; [QBR2] ರಾತ್ರಿಯ ಅಪಾಯದ ನಿಮಿತ್ತ [QBR2] ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.
9. ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು [QBR2] ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ. [QBR]
10. ಅದರ ಕಂಬಗಳನ್ನು ಬೆಳ್ಳಿಯಿಂದಲೂ [QBR2] ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. [QBR] ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. [QBR2] ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.
11. ಚೀಯೋನಿನ ಸ್ತ್ರೀಯರೇ, [QBR2] ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. [QBR] ಅವನ ಮದುವೆಯ ದಿನದಲ್ಲಿ [QBR2] ಹೃದಯವು ಹರ್ಷಗೊಂಡಿದ್ದಾಗ [QBR2] ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ. [PE]

ಟಿಪ್ಪಣಿಗಳು

No Verse Added

ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 8
1 2 3 4 5 6 7 8
ಪರಮ ಗೀತ 3:2
ಪ್ರಿಯತಮೆ 1 ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ. 2 ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ. 3 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು. 4 ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು. ಪ್ರಿಯತಮೆ ಸ್ತ್ರೀಯರಿಗೆ 5 ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ. ಜೆರುಸಲೇಮಿನ ಸ್ತ್ರೀಯರ ಮಾತುಗಳು 6 ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ. 7 ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು! 8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ. 9 ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ. 10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ. 11 ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 8
1 2 3 4 5 6 7 8
Common Bible Languages
West Indian Languages
×

Alert

×

kannada Letters Keypad References