ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಪರಮ ಗೀತ
1. {ಪ್ರಿಯಕರ} [PS] ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. [QBR2] ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. [QBR] ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. [QBR2] ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! [QBR2] ಪ್ರೀತಿಯಿಂದ ಮತ್ತರಾಗಿ! {ಪ್ರಿಯತಮೆ}
2. {ಪ್ರಿಯತಮೆಯು ಸ್ನೇಹಿತರಿಗೆ} [PS] ನಾನು ನಿದ್ರೆಮಾಡುತ್ತಿರುವಾಗಲೂ [QBR2] ಹೃದಯ ಎಚ್ಚರವಾಗಿರುವುದು. [QBR] ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. [QBR2] “ನನ್ನ ಪ್ರಿಯಳೇ, ನನ್ನ ಕಾಂತಳೇ, [QBR] ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! [QBR2] ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; [QBR] ನನ್ನ ಕೂದಲು ರಾತ್ರಿ ಬೀಳುವ [QBR2] ಹನಿಗಳಿಂದ ತೇವವಾಗಿದೆ.”
3. “ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; [QBR2] ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. [QBR] ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. [QBR2] ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”
4. ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ [QBR2] ಅವನ ಮೇಲೆ ನನಗೆ ಮರುಕವಾಯಿತು. [QBR]
5. ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ [QBR2] ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ [QBR] ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ [QBR2] ತೊಟ್ಟಿಕ್ಕಿದವು. [QBR]
6. ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ [QBR2] ನನ್ನ ಪ್ರಿಯನು ಹೊರಟುಹೋಗಿದ್ದನು! [QBR] ಅವನು ಇಲ್ಲದಿರುವುದನ್ನು ಕಂಡು [QBR2] ನನ್ನ ಹೃದಯವು ಕುಸಿದುಹೋಯಿತು. [QBR] ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. [QBR2] ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ. [QBR]
7. ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು [QBR2] ಹೊಡೆದು ಗಾಯಮಾಡಿದರು. [QBR] ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು [QBR2] ತೆಗೆದುಕೊಂಡರು.
8. ಜೆರುಸಲೇಮಿನ ಸ್ತ್ರೀಯರೇ, [QBR2] ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.
9. {ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ} [PS] ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, [QBR2] ನಿನ್ನ ಪ್ರಿಯನ ಅತಿಶಯವೇನು? [QBR] ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು [QBR2] ನಿನ್ನ ಪ್ರಿಯನ ಅತಿಶಯವೇನು?
10. {ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ} [PS] ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. [QBR2] ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ. [QBR]
11. ಅವನ ತಲೆಯು ಚೊಕ್ಕ ಬಂಗಾರದಂತಿದೆ; [QBR2] ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ. [QBR]
12. ಅವನ ಕಣ್ಣುಗಳು [QBR2] ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ [QBR2] ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ. [QBR]
13. ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ [QBR2] ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. [QBR] ಅವನ ತುಟಿಗಳು ಕೆಂದಾವರೆಗಳಂತಿವೆ; [QBR2] ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ. [QBR]
14. ಅವನ ಕೈಗಳು ಪೀತರತ್ನದಿಂದ ಕೂಡಿದ [QBR2] ಬಂಗಾರದ ಸಲಾಕೆಯಂತಿವೆ; [QBR] ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ [QBR2] ನಯವಾದ ದಂತದಂತಿದೆ. [QBR]
15. ಅವನ ಕಾಲುಗಳು ಬಂಗಾರದ ಪಾದಗಳುಳ್ಳ [QBR2] ಅಮೃತ ಶಿಲೆಯ ಕಂಬಗಳಂತಿವೆ. [QBR] ಅವನು ಲೆಬನೋನಿನ [QBR2] ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ. [QBR]
16. ಹೌದು, ಜೆರುಸಲೇಮಿನ ಸ್ತ್ರೀಯರೇ, [QBR2] ನನ್ನ ಪ್ರಿಯನು ಅತ್ಯಂತ ಮನೋಹರನು; [QBR] ಅವನ ನುಡಿ ಬಹು ಇಂಪು. [QBR2] ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು. [PE]
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 8
1 2 3 4 5 6 7 8
ಪ್ರಿಯಕರ 1 ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ.
ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ! ಪ್ರಿಯತಮೆ
ಪ್ರಿಯತಮೆಯು ಸ್ನೇಹಿತರಿಗೆ 2 ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು.
ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ,
ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ;
ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”
3 “ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ.
ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”
4 ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.
5 ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ
ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.
6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು!
ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು.
ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.
7 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು.
ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.
8 ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ. ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ 9 ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು?
ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?
ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ 10 ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.
11 ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.
12 ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.
13 ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ.
ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
14 ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ;
ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.
15 ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ.
ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.
16 ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು;
ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.
ಒಟ್ಟು 8 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 8
1 2 3 4 5 6 7 8
×

Alert

×

Kannada Letters Keypad References