ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಜೆಕರ್ಯ
1. {ದೇವರು ಅನ್ಯ ದೇಶಗಳವರನ್ನು ಶಿಕ್ಷಿಸುವನು} [PS] ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. [QBR2] ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು. [QBR]
2. ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. [QBR2] ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. [QBR] ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ [QBR2] ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು. [QBR]
3. ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. [QBR2] ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. [QBR] ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. [QBR2] ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ. [PS]
4. ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು.
5. ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.
6. ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.” [PE][PS]
7. ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.
8. ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.
9. ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.
10. ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.
11. ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು. [PE][PS]
12. ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.
13. ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.
14. ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು. [PE][PS]
15. ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ.
16. ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”
17. ಕೆಲಸಕ್ಕೆ ಬಾರದ ಕುರುಬನೇ, [QBR2] ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ. [QBR] ಅವನನ್ನು ಶಿಕ್ಷಿಸಿರಿ! [QBR2] ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ. [QBR2] ಆಗ ಅವನ ಬಲಗೈ ಅಪ್ರಯೋಜಕವಾಗುವದು, [QBR2] ಬಲಗಣ್ಣು ದೃಷ್ಟಿಹೀನವಾಗುವದು. [PE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 14
1 2 3 4 5 6 7 8 9 10 11 12 13 14
ದೇವರು ಅನ್ಯ ದೇಶಗಳವರನ್ನು ಶಿಕ್ಷಿಸುವನು 1 ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.
2 ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು.
ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.
3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ.
ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
4 ನನ್ನ ದೇವರಾದ ಯೆಹೋವನು ಹೇಳುವುದೇನೆಂದರೆ, “ಕೊಲ್ಲುವದಕ್ಕೋಸ್ಕರವಾಗಿ ಬೆಳೆಸಿದ ಕುರಿಗಳನ್ನು ಪರಾಮರಿಸು. 5 ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ. 6 ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”
7 ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು. 8 ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು. 9 ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು. 10 ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು. 11 ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು. 12 ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. 13 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು. 14 ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು. 15 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ. 16 ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.” 17 ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ.
ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು, ಬಲಗಣ್ಣು ದೃಷ್ಟಿಹೀನವಾಗುವದು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References