ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಜೆಕರ್ಯ
1. {ಹಾರುವ ಸುರುಳಿ} [PS] ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು.
2. “ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. [PE][PS] “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು. [PE][PS]
3. ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.
4. ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’ ” [PS]
5. {ಸ್ತ್ರೀ ಮತ್ತು ಬುಟ್ಟಿ} [PS] ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು. [PE][PS]
6. “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. [PE][PS] ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು. [PE][PS]
7. ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು.
8. ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು.
9. ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.
10. ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು. [PE][PS]
11. “ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು. [PE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 14
1 2 3 4 5 6 7 8 9 10 11 12 13 14
ಹಾರುವ ಸುರುಳಿ 1 ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು. 2 “ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು. 3 ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ. 4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’ ” ಸ್ತ್ರೀ ಮತ್ತು ಬುಟ್ಟಿ 5 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು. 6 “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು. 7 ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು. 8 ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು. 9 ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು. 10 ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು. 11 “ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References