ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಜೆಕರ್ಯ
1. {ಇತರ ಜನಾಂಗಗಳ ಮೇಲೆ ನ್ಯಾಯತೀರ್ಪು} [PS] ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.
2. ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು.
3. ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ದೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.
4. ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು. [PE][PS]
5. “ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.
6. ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
7. ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.
8. ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”
9. {ಭವಿಷ್ಯತ್ತಿನ ಅರಸನು} [PS] ಚೀಯೋನ್ ನಗರಿಯೇ, ಹರ್ಷಿಸು! [QBR2] ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. [QBR] ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! [QBR2] ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, [QBR2] ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು. [QBR]
10. ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; [QBR2] ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. [QBR2] ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ [QBR2] ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.
11. {ಯೆಹೋವನು ತನ್ನ ಜನರನ್ನು ಕಾಪಾಡುವನು} [PS] ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. [QBR2] ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ. [QBR]
12. ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. [QBR2] ಈಗ ನಿಮಗೊಂದು ನಿರೀಕ್ಷೆಯಿದೆ. [QBR] ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, [QBR2] ನಾನು ತಿರುಗಿ ಬರುತ್ತೇನೆ. [QBR]
13. ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. [QBR2] ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು. [QBR] ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧಮಾಡಲು [QBR2] ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು. [QBR]
14. ಯೆಹೋವನು ಅವರಿಗೆ ಕಾಣಿಸಿಕೊಂಡು [QBR2] ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. [QBR] ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ [QBR2] ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು. [QBR]
15. ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. [QBR2] ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. [QBR] ಶತ್ರುಗಳ ರಕ್ತವನ್ನು ಚೆಲ್ಲುವರು. [QBR2] ಅದು ದ್ರಾಕ್ಷಾರಸದಂತೆ ಹರಿಯುವದು. [QBR2] ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು. [QBR]
16. ಆ ಸಮಯಗಳಲ್ಲಿ ದೇವರಾದ ಯೆಹೋವನು, [QBR2] ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ [QBR2] ತನ್ನ ಜನರನ್ನು ರಕ್ಷಿಸುವನು. [QBR] ಅವರು ಆತನಿಗೆ ಅಮೂಲ್ಯರಾಗಿರುವರು. [QBR2] ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು. [QBR]
17. ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. [QBR2] ಬೆಳೆಯು ಸುಭಿಕ್ಷವಾಗಿರುವುದು. [QBR] ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, [QBR2] ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು. [PE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 14
1 2 3 4 5 6 7 8 9 10 11 12 13 14
ಇತರ ಜನಾಂಗಗಳ ಮೇಲೆ ನ್ಯಾಯತೀರ್ಪು 1 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು. 2 ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು. 3 ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ದೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ. 4 ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು. 5 “ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು. 6 ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. 7 ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು. 8 ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.” ಭವಿಷ್ಯತ್ತಿನ ಅರಸನು 9 ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ.
ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.
10 ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು. ಯೆಹೋವನು ತನ್ನ ಜನರನ್ನು ಕಾಪಾಡುವನು 11 ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.
12 ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ.
ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.
13 ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು.
ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು.
14 ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು.
ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.
15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು.
ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.
16 ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು.
ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.
17 ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು.
ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References