1. ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
|
2. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
|
3. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
|
4. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
|
5. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
|
6. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
|
7. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
|
9. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
|
30. ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
|