3. ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
|
4. ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
|
5. ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
|
7. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
|
9. ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
|
11. ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
|
15. ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
|
17. ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
|
18. ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
|
19. ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
|
20. ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
|
21. ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
|
22. ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
|
23. ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
|