1. ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
|
2. ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
|
5. ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
|
7. ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
|
8. ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
|
9. ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
|