1. ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
|
3. ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
|
4. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
|
5. ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
|
6. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
|
7. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
|
8. ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
|
10. ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--
|
11. ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
|
12. ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
|
13. ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
|
16. ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
|
17. ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
|
18. ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
|
19. ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
|
20. ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
|
22. ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
|
23. ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
|
25. ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
|
27. ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
|
28. ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
|
29. ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
|
30. ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.
|
31. ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
|
32. ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
|
33. ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
|
34. ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
|
35. ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
|
36. ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
|
37. ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
|
38. ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
|
40. ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
|
41. ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
|