ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2. ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
3. ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
4. ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
5. ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
6. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
7. ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
8. ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
9. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
10. ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
11. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
12. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
13. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
14. ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.

Notes

No Verse Added

Total 22 Chapters, Current Chapter 5 of Total Chapters 22
ಪ್ರಕಟನೆ 5
1. ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2. ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
3. ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
4. ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
5. ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
6. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
7. ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಪುಸ್ತಕ ವನ್ನು ತೆಗೆದುಕೊಂಡನು.
8. ಆತನು ಪುಸ್ತಕವನ್ನು ತೆಗೆದುಕೊಂಡಾಗ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
9. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
10. ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
11. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
12. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
13. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
14. ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Total 22 Chapters, Current Chapter 5 of Total Chapters 22
×

Alert

×

kannada Letters Keypad References