ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು
1. ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--
2. ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
3. ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
4. ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.
5. ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.
6. ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
7. ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
8. ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
9. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
10. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
11. ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
12. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
13. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
14. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
15. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
16. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
17. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
18. ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
19. ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
20. ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.
21. ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
22. ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
23. ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
24. ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.
25. ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 42
1 ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ-- 2 ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು. 3 ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು. 4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು. 5 ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. 6 ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು. 7 ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. 8 ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. 9 ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. 10 ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. 11 ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. 12 ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. 13 ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. 14 ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. 15 ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. 16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. 17 ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. 18 ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. 19 ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. 20 ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು. 21 ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. 22 ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. 23 ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. 24 ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ. 25 ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 42
×

Alert

×

Kannada Letters Keypad References