2. ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
|
3. ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
|
4. ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
|
6. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
|
7. ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
|
8. ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
|
9. ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
|
10. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
|
12. ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
|
13. ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
|
17. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
|
18. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
|
20. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
|
21. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
|
22. ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
|
23. ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
|
24. ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
|
25. ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
|
26. ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
|
27. ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
|
28. ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
|
30. ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
|
31. ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
|
34. ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
|
35. ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
|