2. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
|
4. ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
|
6. ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
|
7. ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
|
9. ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
|
10. ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
|
12. ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
|