1. {ದೇವಾಲಯದ ದ್ವಾರಪಾಲಕರು} PS ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ:
ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ. |
2. ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು.
|
4. ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,
|
5. ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.
|
7. ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.
|
8. ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.
|
10. ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.
|
11. ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.
|
13. ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.
|
14. ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.
|
16. ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.
|
17. ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,
|
20. {ದೇವಾಲಯ ಭಂಡಾರದ ಖಜಾಂಚಿಗಳು ಮತ್ತು ಇತರ ಅಧಿಕಾರಿಗಳು} PS ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
|
24. ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.
|
25. ಎಲೀಯೆಜೆರನ ಮಗ ರೆಹಬ್ಯ,
ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು. PEPS |
26. ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
|
27. ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.
|
28. ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. PEPS
|
29. ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.
|
30. ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.
|
31. ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.
|
32. ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು. PE
|