1. {ಸೊಲೊಮೋನನು ದೇವಾಲಯವನ್ನು ಕಟ್ಟಿದ್ದು} PS ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
|
2. ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ * ಮೊಳ 27 ಮೀಟರ್. , ಅಗಲ ಇಪ್ಪತ್ತು ಮೊಳ, † ಇಪ್ಪತ್ತು ಮೊಳ, 9 ಮೀಟರ್. ಎತ್ತರ ಮೂವತ್ತು ಮೊಳ ‡ ಎತ್ತರ ಮೂವತ್ತು ಮೊಳ 13.5 ಮೀಟರ್. .
|
3. ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, § ಇಪ್ಪತ್ತು ಮೊಳ, 9 ಮೀಟರ್. ಅಗಲ ಹತ್ತು ಮೊಳ * ಹತ್ತು ಮೊಳ 4.5 ಮೀಟರ್ .
|
5. ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.
|
6. ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು. PEPS
|
7. ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.
|
8. ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.
|
9. ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.
|
10. ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು. PEPS
|
12. “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
|
15. {ದೇವಾಲಯದ ಒಳಗಿನ ಅಲಂಕಾರ} PS ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
|
16. ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
|
18. ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
|
20. ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.
|
21. ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
|
22. ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು. PEPS
|
23. ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
|
24. ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.
|
27. ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.
|
29. ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
|
32. ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು. PEPS
|
34. ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
|
35. ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.
|
38. ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು. PE
|