ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಸಮುವೇಲನು
1. {ಸೌಲನ ಮತ್ತು ಅವನ ಮಕ್ಕಳ ಮರಣ} [PS] ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
2. ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
3. ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.
4. ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.
5. ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.
6. ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
7. ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು. [PE][PS]
8. ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
9. ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
10. ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
11. ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
12. ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
13. ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು. [PE]

Notes

No Verse Added

Total 31 Chapters, Current Chapter 31 of Total Chapters 31
1 ಸಮುವೇಲನು 31:1
1. {ಸೌಲನ ಮತ್ತು ಅವನ ಮಕ್ಕಳ ಮರಣ} PS ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
2. ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
3. ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.
4. ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.
5. ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.
6. ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
7. ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು. PEPS
8. ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
9. ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
10. ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
11. ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
12. ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
13. ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು. PE
Total 31 Chapters, Current Chapter 31 of Total Chapters 31
×

Alert

×

kannada Letters Keypad References