1. {ಸೌಲ ಮತ್ತು ಸಮುವೇಲರ ಭೇಟಿ} PS ಬೆನ್ಯಾಮೀನ್ ಕುಲದಲ್ಲಿ * 1ಪೂರ್ವ 9:39. ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
|
2. ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.
|
3. ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
|
4. ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, † 2 ಅರಸು. 4:42. ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.
|
5. ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು
|
6. ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ‡ ಧರ್ಮೋ 33:1. ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.
|
7. ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ § 1 ಅರಸು. 14:3 ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
|
8. ಆಳು, “ಇಗೋ, ನನ್ನ ಕೈಯಲ್ಲಿ * ಪಾವಲಿ ಎಂದರೆ ಒಂದು ಬೆಳ್ಳಿ ನಾಣ್ಯದ ಕಾಲು ಭಾಗ. ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
|
9. (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ † ಆದಿ 25:22. ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ‡ 1ಪೂರ್ವ 29:30. ದೇವದರ್ಶಿಗಳೆಂದು ಕರೆಯುತ್ತಿದ್ದರು.)
|
11. ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;
|
12. ಈ ಹೊತ್ತು ನಮ್ಮ ಊರಿನವರು § 1 ಅರಸು. 3:2-4. ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.
|
13. ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
|
16. “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. * ವಿಮೋ 3:7, 9. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
|
17. ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
|
18. ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ.
|
19. ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
|
20. ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.
|
21. ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? † ನ್ಯಾಯ 20:46. ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
|
22. ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
|
24. ಅವನು ‡ ಯಾಜ 7:32-33. ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
|
25. ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ § ಮಾಳಿಗೆಯ ಮೇಲೆ ಸೌಲನಿಗಾಗಿ ಮಂಚವನ್ನು ಸಿದ್ಧಪಡಿಸಲಾಗಿತ್ತು ಅವನು ಅದರ ಮೇಲೆ ಮಲಗಿದ್ದನು. ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು. PEPS
|
26. ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
|
27. ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು. PE
|