1. {ಇಸ್ರಾಯೇಲ್ಯರ ಮತ್ತು ಫಿಲಿಷ್ಟಿಯರ ಯುದ್ಧ} PS ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
|
2. ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
|
3. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು * ನ್ಯಾಯ 3:27. ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
|
4. ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
|
5. ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
|
6. ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು † ಇಬ್ರಿ. 11:38. ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
|
7. ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
|
8. ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. PS
|
9. {ಸೌಲನ ಅವಿಧೇಯತೆ ಮತ್ತು ಸಮುವೇಲನು ಗದರಿಸಿದ್ದು} PS ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
|
11. ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.
|
12. ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
|
13. ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
|
14. ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ‡ ಅ.ಕೃ. 13:22. ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
|
16. {ಆಯುಧ ರಹಿತರಾದ ಇಸ್ರಾಯೇಲ್ಯರು} PS ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
|
17. ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ,
|
18. ಇನ್ನೊಂದು ಗುಂಪು § ಯೆಹೋ. 10:10 ಬೇತ್ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
|
19. ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
|
20. ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
|
21. ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ * ಅರ. ಹರಿತ ಮಾಡುವ ಕಲ್ಲು ಮಾತ್ರ ಇತ್ತು.
|
22. ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ. PS
|