1. ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.
|
2. ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,
|
3. * ವಿಮೋ 28:6-30. ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು † ಯೆಹೋ. 18:1. ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.
|
4. ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.
|
5. ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.
|
6. ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ‡ ನ್ಯಾಯ 7:4,7 ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.
|
7. ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.
|
9. ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.
|
10. ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು. PEPS
|
11. ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
|
12. ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.
|
13. ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
|
14. ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು § ಇಬ್ರಿಯ ಭಾಷೆಯಲ್ಲಿ: ಒಂದು ದಿನದಲ್ಲಿ ಉಳುವಷ್ಟು ಭೂಮಿಯ ಅರ್ಧ ಅಥವಾ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿ. ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು. PS
|
15. {ಫಿಲಿಷ್ಟಿಯರ ಅಪಜಯ} PS ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
|
16. ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು * ಯೆಹೋ. 2:9. ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.
|
17. ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು.
|
18. ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.
|
19. † ಅರಣ್ಯ 27:21. ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ
|
20. ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ‡ ನ್ಯಾಯ 7:22 ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.
|
21. ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.
|
22. ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
|
24. {ಸೌಲನ ಬುದ್ಧಿಹೀನ ಆಜ್ಞೆ} PS ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
|
27. ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ * ಅವನು ತನ್ನ ಬಲವನ್ನು ಪುನಃ ಪಡೆದುಕೊಂಡನು. ಪುನಶ್ಚೇತನ ಕಣ್ಣುಗಳು ಕಳೆಗೊಂಡವು.
|
28. ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
|
29. ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.
|
30. ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು.
|
32. ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು † ಯಾಜ 3:17. ರಕ್ತದೊಡನೆ ತಿಂದರು.
|
33. ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;
|
34. ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ’ ” ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
|
35. ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು. PEPS
|
36. ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.
|
37. ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.
|
38. ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.
|
39. ‡ ರೂತ. 3:13. ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.
|
40. ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು.
|
41. ಅನಂತರ ಸೌಲನು, “ § ವಿಮೋ 28:30. ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ * ಅ.ಕೃ. 1:24-26. ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.
|
43. ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.
|
45. ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.
|
47. {ಸೌಲನ ಯುದ್ಧಗಳೂ ಅವನ ಕುಟುಂಬವೂ} PS ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.
|
48. ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು. PEPS
|
52. ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು. PE
|