1. {ದಾವೀದನ ರಾಜಾಭಿಷೇಕ} PS ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.
|
2. ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
|
3. ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. PS
|
4. {ದಾವೀದನು ಯೆರೂಸಲೇಮನ್ನು ಸ್ವಾಧೀನಮಾಡಿಕೊಂಡದ್ದೂ} PS ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.
|
5. ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.
|
6. ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.
|
8. ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.
|
10. {ದಾವೀದನ ರಣವೀರರು} PS ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
|
11. ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.
|
13. ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,
|
14. ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು. PEPS
|
15. ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.
|
17. ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.
|
18. ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
|
19. ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. PEPS
|
20. ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
|
21. ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.
|
22. ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
|
23. ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
|
25. ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. PEPS
|