1. ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
|
3. ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು. PS
|
4. {ಮಂಜೂಷದ ಮುಂದೆ ಹಾಡಿದ ಕೀರ್ತನೆ} PS ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
|
5. ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
|
6. ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
|
7. ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
|
8. “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
|
12. ಆತನ ಸೇವಕನಾದ ಇಸ್ರಾಯೇಲಿನ * ಇಸ್ರಾಯೇಲಿನ ಅಥವಾ ಅಬ್ರಹಾಮನ. ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
|
15. ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
|
29. ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
|
31. ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
|
35. ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
|
36. ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು. PS
|
37. {ಯೆರೂಸಲೇಮ್ ಮತ್ತು ಗಿಬ್ಯೋನಿನಲ್ಲಿ ಆರಾಧನೆ} PS ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
|
40. ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
|
41. ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
|
42. ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು. PEPS
|
43. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು. PE
|